ವರದಿಗಾರರು :
ಬಸವರಾಜ ಪೂಜಾರಿ ||
ಸ್ಥಳ :
ಬೀದರ
ವರದಿ ದಿನಾಂಕ :
10-12-2025
ಬೀದರ್ ಕೆಇಬಿ ಮತ್ತು ಸಹ್ಯಾದ್ರಿ ಲೇಔಟ್ಗಳ ಮೂಲಸೌಕರ್ಯಕ್ಕೆ ಕರ್ನಾಟಕ ಸೇನೆ ಮನವಿ
ಬೀದರ್‌ನ ಕೆ.ಇ.ಬಿ ಹಾಗೂ ಸಹ್ಯಾದ್ರಿ ಲೇಔಟ್‌ಗಳಿಗೆ ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು
ಕೆಇಬಿ-ಸಹ್ಯಾದ್ರಿ ಲೇಔಟ್‌ಗೆ ಮೂಲಸೌಕರ್ಯಕ್ಕೆ ಆಗ್ರಹ ಬೀದರ್: ನಗರದ ನೌಬಾದ್ ಸಮೀಪದ ಕೆ.ಇ.ಬಿ. ಹಾಗೂ ಸಹ್ಯಾದ್ರಿ ಲೇಔಟ್‌ಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ನಿಯೋಗದಲ್ಲಿ ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು. ಎರಡೂ ಲೇಔಟ್‌ಗಳು 1985 ರಲ್ಲೇ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಯೋಜನೆ ಅನುಮೋದಿತ ಲೇಔಟ್‌ಗಳಾಗಿವೆ.
ನೂರಾರು ಕುಟುಂಬಗಳು ಮನೆ ಕಟ್ಟಿಕೊಂಡು ವಾಸವಾಗಿವೆ. ಆದರೆ, ಮೂಲಸೌಕರ್ಯಗಳು ಇಲ್ಲದ ಕಾರಣ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಸೇನೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಮೇಶ ಚಿದ್ರಿ ಹಾಗೂ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಗಮನ ಸೆಳೆದರು.
ರಸ್ತೆ ಇಲ್ಲದ ಕಾರಣ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು. ಲೇಔಟ್‌ಗಳಲ್ಲಿ ಕೂಡಲೇ ರಸ್ತೆ, ಚರಂಡಿ ಹಾಗೂ ಇತರ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.
