ವರದಿಗಾರರು :
ಮುತ್ತುರಾಜ್ ||
ಸ್ಥಳ :
ತಣ್ಣೇನಹಳ್ಳಿ
ವರದಿ ದಿನಾಂಕ :
13-12-2025
ಇಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
ಕೊರಟಗೆರೆ ತಾಲೂಕಿನ ಕೋಳಾಲಯ ತಣ್ಣೇನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಡಿ.14 ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತç ಚಿಕಿತ್ಸಾ ಶಿಬಿರವನ್ನ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ.
ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಡಿ.14 ರ ಭಾನುವಾರ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರು ಆಗಮಿಸಲಿದ್ದು ಎಂದು ತಿಳಿಸಿದ್ದಾರೆ.
ಸಾಮಾನ್ಯ ರೋಗ ವಿಭಾಗ, ಮಕ್ಕಳ ವಿಭಾಗ ಕಣ್ಣಿನ ತಪಾಸಣೆ ಮತ್ತು ಶಸ್ತç ಚಿಕಿತ್ಸೆ, ಸಾಮಾನ್ಯ ಶಸ್ತç ಚಿಕಿತ್ಸೆ ವಿಭಾಗ, ಇಸಿಜಿ ಮೂತ್ರಪಿಂಡದ ಕಾಯಿಲೆ, ನರರೋಗ ಬೆನ್ನು ನೋವು, ಕಿವಿ, ಮೂಗು, ಗಂಟಲು ಮೂಳೆ ಮತ್ತು ಕೀಲುರೋಗ ವಿಭಾಗ, ಬಿಪಿ ಮತ್ತು ಸಕ್ಕರೆ ಕಾಯಿಲೆ ವಿಭಾಗ ವಿಶೇಷವಾಗಿ ಹೆಣ್ಣು ಸ್ತ್ರೀ ಸೌಖ್ಯ ವಿಭಾಗವಿರುತ್ತದೆ
ಈ ಎಲ್ಲಾ ವಿಭಾಗಕ್ಕೂ ಪ್ರತ್ಯೇಕ ವೈದ್ಯರು ಬರಲಿದ್ದಾರೆ. ತಾಲೂಕಿನ ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಬರುವಾಗ ಆಧಾರ್ ಕಾರ್ಡ್, ಯಶಸ್ವಿನಿ ಕಾರ್ಡ್, ಆಯುಷ್ಮಾನ್ ಭಾರತ್ ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಈ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೇಲ್ವಿಚಾರಕರಾದ ಪರಶುರಾಮ್ ರೆಡ್ಡಿ ದೂರವಾಣಿ ಸಂಖ್ಯೆ: 8884439153 ಅನಿಲ್‌ಕುಮಾರ್ 9108232552 ನಾಗೇಶ್ 8660554309 ನರಸಿಂಹಮೂರ್ತಿ 9972034740 ಇವರನ್ನ ಸಂಪರ್ಕಿಸಿ ಎಂದು ಮನವಿ ಮಾಡಿದ್ದಾರೆ.
