ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
11-12-2025
ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನ�
ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಮಲ್ಲಿಕಾರ್ಜು ನಸ್ವಾಮಿ ಅಭಿಪ್ರಾಯಪಟ್ಟರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮAದಿರದಲ್ಲಿ ಜೆಎಸ್‌ಎಸ್ ಕಲಾಮಂಟಪದಿAದ ಆಯೋಜಿಸಿದ್ದ ಜೆ.ಎಸ್.ಎಸ್. ರಂಗೋತ್ಸವ 2025 ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ಧೇಶಕ ವಿ.ಮಲ್ಲಿಕಾರ್ಜುನಸ್ವಾಮಿ. ಪ್ರಸ್ತುತ ನಾಟಕಗಳನ್ನು ನೋಡುವ ವ್ಯವದಾನ ಜನರಲ್ಲಿ ಇಲ್ಲ. ನಾಟಕ ಕಲೆಯನ್ನು ಮಕ್ಕಳಿಗೆ ರೂಢಿಸಿದರೆ ಅವರು ತಮ್ಮ ಕುಟುಂಬವನ್ನು ನಾಟಕ ನೋಡಲು ಕರೆ ತರುತ್ತಾರೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋನಾರೋತ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಇತರೆ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಇದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಕ್ರೀಡೆ, ಕಲೆ ಸೇರಿದಂತೆ ಜೆಎಸ್‌ಎಸ್ ತಮಗೆ ಇಷ್ಟವಿರುವ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕು. ಇದರಿಂದ ರಂಗೋತ್ಸವ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ವೃದ್ಧಿಯಾಗುತ್ತದೆ ಎಂದರು. ಪತ್ಯೇತರ ಚಟುವಟಿಕೆಗಳು ಶಿಕ್ಷಣಕ್ಕೆ ಅನುಕೂಲವಾಗಿದೆ. ಅಲ್ಲದೇ ಜೆಎಸ್‌ಎಸ್ ಸಂಸ್ಥೆ ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿದ್ದು ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೂ ಸಹಕಾರಿಯಾಗಿವೆ ದೇಶಾದ್ಯಂತ ತನ್ನ ಛಾಪು ಮೂಡಿಸಿದೆ. ಶಿಕ್ಷಣದಲ್ಲಿ ರಂಗ ಶಿಕ್ಷಣ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶರೀಫ ನಾಟಕ ಅಗತ್ಯ. ಈ ಹಿಂದೆ ಗ್ರಾಮೀಣ ಭಾಗದಲ್ಲಿ ವರ್ಷಕ್ಕೊಮ್ಮೆ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ಕಲಾವಿದೆ ರೇಖಾ ರೋಹಿತ್ (ಬೇಬಿ ರೇಖಾ), ಜೆಎಸ್‌ಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಸೇರಿದಂತೆ ಇತರರಿದ್ದರು.
