ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
12-12-2025
ಖಾಲಿ ಹುದ್ದೆಗಳ ನೇಮಕಾತಿ ಚುರುಕು. ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಳಗಾವಿಯ ಅಧಿವೇಶನದ ಮಹತ್ತರ ಬೆಳವಣಿಗೆಯೊಂದರಲ್ಲಿ ನಾನಾ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಗುರುವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನ ಪರಿಷತ್ನಲ್ಲಿ ಮಾತನಾಡಿ ಇದುವರೆಗೂ ತಡೆಯಾಗಿದ್ದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯನ್ನು ಹಂತಹಂತವಾಗಿ ಆರಂಭಿಸಲಾಗುವುದು ಎಂದರು.
ಮೊದಲ ಹಂತದಲ್ಲಿ 24300 ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ಭಾಗದಲ್ಲಿ 32132 ಹುದ್ದೆಗಳ ನೇಮಕ ನಡೆಯಲಿದೆ ಎಂದ ಅವರು ರಾಜ್ಯದಲ್ಕಿ ಒಟ್ಟು 2,84,881 ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು.
ಪೋಲಿಸ್ , ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಸಾಧಕರಿಗೆ ಶೇ 3 ಮತ್ತು ಇತರ ಇಲಾಖೆಗಳಲ್ಲಿ ಶೇ 2 ಮೀಸಲಾತಿ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಿ.ಎಮ್ ಸಿದ್ಧರಾಮಯ್ಯ ತಿಳಿಸಿದರು
ಆರೋಗ್ಯ ಸಚಿವ ದಿನೇಶ ಗುಂಡುರಾವ್ ಮಾತನಾಡಿ ವೈದ್ಯ, ತಜ್ಞವೈದ್ಯರ 3000 ಹುದ್ದೆಗಳು ಖಾಲಿ ಇದ್ದು ಬರುವ ಜನವರಿಯಂದು 1500 ಹುದ್ದೆಗಳ ನೇಮಕಾತಿ ಆಗಲಿದೆ ಎಂದರು.
