ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
12-12-2025
ಮಾಜಿ ಗೃಹ ಸಚಿವ ,ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ವಿಧಿವಶ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಗೃಹ ಸಚಿವರಾಗಿದ್ದ ಶಿವರಾಜ್ ಪಾಟೀಲ್ ಇಂದು ಮುಂಜಾನೆ ನಿಧನರಾದರು.
ಅನಾರೋಗ್ಯದಿಂದ ಬಳಲುತಿದ್ದ 91 ವರ್ಷದ ಶಿವರಾಜ್ ಪಾಟೀಲ್ ಅವರು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
1991 ರಿಂದ 1996 ರವರೆಗೆ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ,2004 ರಿಂದ 2008 ರವರೆಗೆ ಕೇಂದ್ರದಲ್ಲಿ ಗೃಹ ಸಚಿವರಾಗಿದ್ದ ಅವರು ಮುಂಬೈ ಭಯೋತ್ಪಾದಕ ದಾಳಿಯ ನಂತರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
