ವರದಿಗಾರರು :
ಕಿಶೋರ್ ಎ ಸಿ ||
ಸ್ಥಳ :
ಸವಣೂರು
ವರದಿ ದಿನಾಂಕ :
11-12-2025
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ
ಆಕ್ರೋಶಗೊಂಡ ಗ್ರಾಮಸ್ಥರು ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆಸವಣೂರು ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
