ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ
ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ ಮತ್ತು ಚೀನಾವನ್ನು ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ.
ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು ಪಾಶ್ಚಿಮಾತ್ಯ ರಾಷ್ಟ್ರಗಳು ಈ ರೀತಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಆಸಿಯಾನ್ ಪಾತ್ರವನ್ನು ದುರ್ಬಲಗೊಳಿಸಲು ಪಶ್ಚಿಮ ಪ್ರಯತ್ನಿಸುತ್ತಿದೆ. ಹೀಗಾಗಿ ಯುರೇಷಿಯಾದಲ್ಲಿ ಸಾಮೂಹಿಕ ಭದ್ರತಾ ವ್ಯವಸ್ಥೆಗಾಗಿ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಫ್ರಿಕಾದಲ್ಲಿ ಉಪ-ಪ್ರಾದೇಶಿಕ ಸ್ವರೂಪಗಳ ಜೊತೆಗೆ ಆಫ್ರಿಕನ್ ಒಕ್ಕೂಟ ಸ್ಥಾಪನೆಯಾಗಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಲ್ಯಾಟಿನ್ ಅಮೆರಿಕನ್ ಮತ್ತು ಕೆರಿಬಿಯನ್ ರಾಜ್ಯಗಳ ಸಮುದಾಯ ರಚನೆಯಾಗಿದೆ. ಆದರೆ ಇಲ್ಲಿಯವರೆಗೆ ಯುರೇಷಿಯಾದಲ್ಲಿ ಇದುವರೆಗೂ ಅಂತಹ ಯಾವುದೇ ಸಾಮೂಹಿಕ ಸಂಘಟನೆ ರಚನೆಯಾಗಿಲ್ಲ ಎಂದು ತಿಳಿಸಿದರು.
ಇತರೆ ಸುದ್ದಿಗಳು