ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
03-12-2025
ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಸ್ತ್ರೀ ಶಕ್ತಿ
ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದಿನ ತಿಂಗಳು ಜನವರಿಯಲ್ಲಿ ನಡೆಯಲಿದೆ. ಅದರಲ್ಲೂ ಪ್ರಮುಖ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದ್ದು, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಬಂದ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಪಟ್ಟಿಯಲ್ಲಿ ಮುಂಚೂಣಿ ಸ್ಥಾನದಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ಸ್ತ್ರೀ ಶಕ್ತಿಗೆ ಮಣೆ ಹಾಕಿದ್ದು ಬಹು ಸೂಕ್ಷ್ಮವಾಗಿ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ??
ಹೌದು ಕರ್ನಾಟಕ ರಾಜ್ಯ ಬಿಜೆಪಿಯಲ್ಲೂ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯ ಬಿಜೆಪಿಯ ರೆಬಲ್ಸ್ ತಂಡ ಈಗಾಗಲೇ ದೆಹಲಿಗೆ ಪ್ರಯಾಣ ಬೆಳೆಸಿದ್ದು ಅಮಿತ್ ಶಾ ಭೇಟಿಗೆ ಸಮಯವಕಾಶ ಕೋರಿದೆ. ಕೆಲ ಮೂಲಗಳ ಪ್ರಕಾರ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರನ್ನ ಅಧ್ಯಕಗಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಇತ್ತ ಬಿಜೆಪಿ ಕೆಲ ಮುಖಂಡರು ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾಣೆಯೂ ಇಲ್ಲ ಬಿವೈವಿಜಯೇಂದ್ರ ಅವರು ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದಿದ್ದಾರೆ.
