ವರದಿಗಾರರು :
ಸಂಗನಗೌಡ ಗಬಸಾವಳಗಿ ||
ಸ್ಥಳ :
ವಿಜಯಪುರ
ವರದಿ ದಿನಾಂಕ :
15-11-2025
ಜಿಲ್ಲಾ ಕ್ರೀಡಾಕೂಟದಲ್ಲಿ ನರಸಲಗಿಯ ಸುನಿಲ ಚವ್ವಾಣ ಮಿಂಚು — ರಾಜ್ಯ ಮಟ್ಟಕ್ಕೆ ಆಯ್ಕೆ
ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಮಾತೋಶ್ರೀ ದುಂಡಮ್ಮ ಸಂಗನಗೌಡ ಪಾಟೀಲ ಪ್ರೌಢ ಶಾಲೆಯ ವಿದ್ಯಾರ್ಥಿ ಸುನಿಲ ರಾಜು ಚವ್ವಾಣ ಅವರು ವಿಜಯಪುರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅದ್ಭುತ ಕ್ರೀಡಾಪ್ರತಿಭೆ ತೋರಿದ್ದಾರೆ.
800 ಮೀ. ಓಟದಲ್ಲಿ ಪ್ರಥಮ ಸ್ಥಾನ ಮತ್ತು 3000 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುನಿಲ ಅವರು ಇದೀಗ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸುನಿಲ ಅವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎನ್. ಮಾಡಗಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಬಿ.ಪಿ. ಲಮಾಣಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
