ಬೈಕ್ ಮತ್ತು ಮಹೀಂದ್ರಾ ವಾಹನ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಇಬ್ಬರ ದಾರುಣ ಸಾವು
ಬನಹಟ್ಟಿ, ಅ.8: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ರಬಕವಿ-ಬನಹಟ್ಟಿ ದಿಂದ ಜಮಖಂಡಿ ಕಡೆಗೆ ತೆರಳುತ್ತಿದ್ದ ವೇಳೆ, ವಿಠ್ಠಲ್ ಮಂದಿರ ಹತ್ತಿರ ಮಹೀಂದ್ರಾ ವಾಹನ ಮತ್ತು ಬೈಕ್ ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯು ಇಬ್ಬರ ಬದುಕಿಗೆ ತೆರೆ ಎಳೆದಿದೆ.
ಮೃತರನ್ನು ರೋಜಾಕ್ ಸಿಕಂದರ್ ಮುಲ್ಲಾ (54) ಮತ್ತು ಹರ್ಷದ ಆಸಿಫ್ ಬೆಪಾರಿ (1) ಎಂದು ಗುರುತಿಸಲಾಗಿದೆ. ಇಬ್ಬರೂ ರಬಕವಿ-ಬನಹಟ್ಟಿ ತಾಲೂಕಿನ ರಾಂಪುರ ನಿವಾಸಿಗಳೆಂದು ತಿಳಿದುಬಂದಿದೆ.
ಘಟನೆ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇತರೆ ಸುದ್ದಿಗಳು