ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಕ್ಕಪಾಠ.
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 22-11-2025

ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಕ್ಕಪಾಠ.

ತುಮಕೂರು : ತಂದೆ-ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಂದೆ ತಾಯಿ ತಕ್ಕ ಪಾಠ ಕಲಿಸಿದ್ದು, ತಾವು ದಾನವಾಗಿ ನೀಡಿದ ಆಸ್ತಿಯನ್ನು ವಾಪಾಸ್ ಪಡೆದುಕೊಳ್ಳುವ ಮೂಲಕ, ಮಕ್ಕಳಿಗೆ ಬುದ್ಧಿ ಕಳಿಸಿದ್ದಾರೆ.

ಶಿರಾ ತಾಲ್ಲೂಕಿನ ಸಪ್ತಗಿರಿ ಬಡಾವಣೆಯ ರಂಗಮ್ಮ ಅವರು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ(Senior Citizens Helpline)ವನ್ನು ಸಂಪರ್ಕಿಸಿದ್ದರು. ಈ ಮೂಲಕ ದೂರು ನೀಡಿದ ಅವರು, ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದ ಸ.ನಂ. 37ರ 3-26 ಎ/ಗುಂಟೆ ಜಮೀನನ್ನು ದಿನಾಂಕ 23-12-2021 ರಂದು ತಮ್ಮ ಮೂವರು ಪುತ್ರರಾದ ಗುಜ್ಜಾರಪ್ಪ, ಶಿವಣ್ಣ ಮತ್ತು ಹನುಮಂತಯ್ಯ ಅವರಿಗೆ ದಾನಪತ್ರದ ಮೂಲಕ ನೀಡಿದ್ದಾಗಿ ತಿಳಿಸಿದ್ದಾರೆ. ಆದರೆ ದಾನಪತ್ರ ಪಡೆದ ನಂತರ ಮಕ್ಕಳು ತಾಯಿಯ ಹಾಗೂ ತಂದೆಯ ಆರೈಕೆ, ಆಹಾರ, ಚಿಕಿತ್ಸಾ ನೆರವು, ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಿದ್ದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದ್ದರಿಂದ ದಾನಪತ್ರವನ್ನು ರದ್ದುಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ತಂದೆ ತಾಯಿಯ ದೂರಿನ ಹಿನ್ನೆಲೆ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ ಮೂವರು ಪುತ್ರರು ಜಂಟಿಯಾಗಿ ಲಿಖಿತ ಹೇಳಿಕೆ ಸಲ್ಲಿಸಿದ್ದು, ತಾಯಿ–ತಂದೆಗೆ ಆರೈಕೆ ಮಾಡುತ್ತಿದ್ದೇವೆ, ದಾನಪತ್ರ ತಾಯಿಯ ಸ್ವಇಚ್ಛೆಯಿಂದ ಮಾಡಲಾಗಿದೆ, ಭೂಮಿಯಲ್ಲಿ ಅಭಿವೃದ್ಧಿ ಮಾಡಿರುವುದರಿಂದ ಹಿಂದಿರುಗಿಸಲು ಸಮ್ಮತಿ ಇಲ್ಲ, ತಾಯಿ–ತಂದೆ ತಮ್ಮ ಜತೆ ವಾಸಿಸಲು ಬಂದರೆ ನೋಡಿಕೊಳ್ಳಲು ಸಿದ್ಧ ಎಂದು ಹೇಳಿದರು.

ನಾವು ತಂದೆ ತಾಯಿಯ ಆರೈಕೆ ಮಾಡುತ್ತಿದ್ದೇವೆ ಎಂದು ಹೇಳಿರುವ ಪುತ್ರರು ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತಮ್ಮ ವಾದಕ್ಕೆ ಯಾವುದೇ ಬೆಂಬಲವಾದ ಸಾಕ್ಷಿಗಳು ಅವರಿಂದ ದೊರೆಯಲಿಲ್ಲ.

ವಯೋವೃದ್ಧೆಯ ದೂರನ್ನು ವಿಚಾರಣೆ ನಡೆಸಿದ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯವು ಹಿರಿಯ ನಾಗರಿಕರಾದ ರಂಗಮ್ಮ ಅವರು ತಮ್ಮ ಮೂವರು ಪುತ್ರರಿಗೆ ನೀಡಿದ್ದ ದಾನಪತ್ರವನ್ನು ರದ್ದುಪಡಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ. ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ–2007ರ ಕಲಂ 23(1) ರಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತಂದೆ ತಾಯಿಯಿಂದ ಆಸ್ತಿಯನ್ನು ವರ್ಗಾಯಿಸಿಕೊಂಡ ನಂತರ ಅವರಿಗೆ ಮೂರು ಹೊತ್ತು ಆಹಾರ, ಮೂಲಭೂತ ಸೌಕರ್ಯಗಳನ್ನೂ ಒದಗಿಸದೇ ನಿರ್ಲಕ್ಷಿಸುವ, ಕಿರುಕುಳ ನೀಡುವ ಮಕ್ಕಳಿಗೆ ನ್ಯಾಯಾಲಯದ ಈ ಆದೇಶ ತಕ್ಕ ಪಾಠ ಕಲಿಸಿದಂತಾಗಿದೆ.

ದಾನಪತ್ರದಲ್ಲಿ “ಮಕ್ಕಳು ನನ್ನ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವುದರಿಂದ ನಿರಂತರ ಆರೈಕೆಯ ನಂಬಿಕೆಯಿಂದ ದಾನ” ಮಾಡಲಾಗಿದೆ ಎಂದು ಸ್ಪಷ್ಟವಾದ ಷರತ್ತು ಉಲ್ಲೇಖಿತವಾಗಿದೆ. ಹಿರಿಯರು ಹೇಳಿದಂತೆ, ಮಕ್ಕಳು ಆ ಷರತ್ತನ್ನು ಪಾಲಿಸದಿರುವುದು ದೃಢಪಟ್ಟ ಕಾರಣ, ಕಲಂ 23(1)ರ ಪ್ರಕಾರ ದಾನಪತ್ರ ರದ್ದುಪಡಿಸಲು ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರಾದ ನಾಹಿದಾ ಜಮ್ ಜಮ್, ಕೆ.ಎ.ಎಸ್. ಅವರು ತಮ್ಮ ಆದೇಶದಲ್ಲಿ, ಉಪನೋಂದಣಾಧಿಕಾರಿಗಳು, ಗುಬ್ಬಿ ಕಛೇರಿಯಲ್ಲಿ ದಾಖಲಾದ ಜಿಬಿಬಿ—1–06849–2021–22, ದಿನಾಂಕ 23—12–2021ರ ದಾನಪತ್ರವನ್ನು “ನಿರರ್ಥಕ” ಎಂದು ಘೋಷಿಸಿ ರದ್ದುಪಡಿಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+