ವರದಿಗಾರರು :
ಗಿರೀಶ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
06-11-2025
ಶುಕ್ರವಾರ ಸಂಜೆ 6:45ಕ್ಕೆ ಸುದೀಪ್ ನಟನೆಯ ಮಾರ್ಕ್ ಟೀಸರ್ ಬಿಡುಗಡೆ
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಮಾರ್ಕ್’ ಚಿತ್ರದ ಟೀಸರ್ ಇದೇ ಶುಕ್ರವಾರ ನವೆಂಬರ್ 7ರಂದು ಸಂಜೆ 6.45ಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಸ್ವತಃ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಯಶಸ್ಸಿನ ಬಳಿಕ ಅವರು ಮಾಡುತ್ತಿರುವ ಈ ‘ಮಾರ್ಕ್’ ಚಿತ್ರವು ಈಗಾಗಲೇ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆಯನ್ನು ಹುಟ್ಟಿಸಿದೆ.
ಚಿತ್ರದ ಟೈಟಲ್ ಅನೌನ್ಸ್ಮೆಂಟ್ ಟೀಸರ್ ಹಾಗೂ ಒಂದು ಹಾಡು ಈಗಾಗಲೇ ಬಿಡುಗಡೆಯಾಗಿವೆ. ಡಿಸೆಂಬರ್ 25ರಂದು ಚಿತ್ರ ಬಿಡುಗಡೆಯಾಗುವ ನಿರ್ಧಾರವನ್ನು ಚಿತ್ರತಂಡ ತೆಗೆದುಕೊಂಡಿದ್ದು, ಚಿತ್ರದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಅಂತಿಮ ಹಂತದಲ್ಲಿವೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
