ವರದಿಗಾರರು :
ಎಚ್ ಎಮ್ ಹವಾಲ್ದಾರ ||
ಸ್ಥಳ :
ಯಾದಗಿರಿ
ವರದಿ ದಿನಾಂಕ :
08-11-2025
ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ.
ದಿನಾಂಕ 07-11-2025 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿ ಅವರು ವಿಧಾನಸೌಧದಲ್ಲಿ ಸನ್ಮಾನ್ಯಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆ ನಡೆಯಿತು
ಈ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸವಿವರವಾಗಿ ಚರ್ಚಿಸಿ, ಅವರಿಗೆ ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲೇ ಫಲಪ್ರದ ಕ್ರಮಗಳ ಮೂಲಕ ರೈತರ ಹಿತ ಹಾಗೂ ಸಕ್ಕರೆ ಕಾರ್ಖಾನೆಗಳ ಸ್ಥಿರತೆಯನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನ ಮುಂದುವರಿಸಿದೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದರಾದ ಲೆಹರ್ ಸಿಂಗ್, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
