ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
04-12-2025
ಇಂದು ಸಂಜೆ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ
ಇಂದು ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಮಾಡಲಿದ್ದಾರೆ.
ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ವಿದ್ಯಮಾನದಲ್ಲಿ ರಷ್ಯಾ ಅಧ್ಯಕ್ಷರ ಭಾರತ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ರಷ್ಯಾ ಅಧ್ಯಕ್ಷ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಭಾರತ ರಷ್ಯಾ ಬಾಂಧವ್ಯ ವೃದ್ಧಿ, ರಕ್ಷಣೆ, ಇಂಧನ , ಬಾಹ್ಯಾಕಾಶ , ಕೃಷಿ ಹಾಗೂ ವ್ಯಾಪಾರ ವಹಿವಾಟು ಸೇರಿದಂತೆ ಮಾತುಕತೆ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಇಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ರಷ್ಯಾ ರಕ್ಷಣಾ ಸಚಿವ ಆಂಡ್ರೆ ಬೆಲ್ಸೌವ್ ಭಾರತ ರಷ್ಯಾ ನಡುವೆ ರಕ್ಷಣೆ ಮತ್ತು ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.
