ವರದಿಗಾರರು :
ನರೇಂದ್ರ ಬಾಬು ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
04-03-2025
ಇನ್ಮುಂದೆ 10 ನಿಮಿಷದಲ್ಲೇ ಮುಗಿಯಲಿದೆ `ಲ್ಯಾಂಡ್ ಸರ್ವೆ'!
ರಾಜ್ಯ ಸರ್ಕಾರವು ಜಮೀನು ಸರ್ವೆ ಕುರಿತಂತೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಕೇವಲ 10 ನಿಮಿಷಗಳಲ್ಲೇ ಆಧುನಿಕ ತಂತ್ರಜ್ಞಾನದ ಮೂಲಕ ಜಮೀನು ಸರ್ವೆ ಮಾಡಬಹುದು.
ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ.
ಈ ಮೂಲಕ ಕಂದಾಯ ಇಲಾಖೆಯು ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, ಚೈನ್ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಉಪಕರಣದ ಮೂಲಕ ಸರ್ವೆ ಮಾಡಲಾಗುತ್ತದೆ. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ. ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಆದರೆ ಇದೀಗ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡಲು ಜನ ಇದ್ದಾರೆ ಎಂದು ಉಢಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
