ಉಮ್ರಾ ಯಾತ್ರೆಗೆ ತೆರಳಿದ ರಹಮತ್ ಬೀ (80) ಸಾವನ್ನಪ್ಪಿದರು
ಬೀದರ್: ಸೌದಿ ಅರೇಬಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬೀದರ್ ನಗರದ ಮಹಿಳೆಯೊಬ್ಬರು ಮೃತಪಟ್ಟಿರುವುದನ್ನು ಜಿಲ್ಲಾಡಳಿತ ಮಂಗಳವಾರ ದೃಢಪಡಿಸಿದೆ. ನಗರದ ಮೈಲೂರಿನ ಸಿಎಂಸಿ ಕಾಲೊನಿಯ ನಿವಾಸಿ ರಹಮತ್ ಬೀ (80) ದುರ್ದೈವಿಯಾಗಿದ್ದಾರೆ.
ಹೈದರಾಬಾದ್ ಮೂಲಕ ಸೌದಿಗೆ ತೆರಳಿದ್ದ ರಹಮತ್ ಬೀ ಅವರು ಉಮ್ರಾ ಯಾತ್ರಿಕರ ಜೊತೆ ಮಕ್ಕಾದಿಂದ ಮದೀನಾಕ್ಕೆ ಪ್ರಯಾಣಿಸುತ್ತಿದ್ದಾಗ ದುರಂತ ಸಂಭವಿಸಿದೆ. ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಇದರಲ್ಲಿ 45 ಮಂದಿ ಯಾತ್ರಿಕರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಎಸ್ಪಿ ಪ್ರದೀಪ್ ಗುಂಟಿ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರ ಮೃತದೇಹವನ್ನು ಜಿಲ್ಲೆಗೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
ಇತರೆ ಸುದ್ದಿಗಳು