ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ಸರಗೂರು
ವರದಿ ದಿನಾಂಕ :
30-10-2025
ಸರಗೂರಿನಲ್ಲಿ ಕಾಡುಪ್ರಾಣಿಗಳ ಹಾವಳಿ ವಿರುದ್ಧ ಬಿಜೆಪಿ ಪ್ರತಿಭಟನೆ
ಸರಗೂರು: ತಾಲೂಕಿನಾದ್ಯಂತ ಕಾಡುಪ್ರಾಣಿಗಳ ದಾಳಿ ಹೆಚ್ಚಾಗಿ ರೈತರಿಗೆ ಬೆಳೆ ಮತ್ತು ಪ್ರಾಣಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಬುಧವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ಸರಗೂರು ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಗೌಡ ಮಾತನಾಡಿ, ಕಳೆದ ವಾರ ಹುಲಿ ದಾಳಿಯಿಂದ ಇಬ್ಬರು ರೈತರು ಗಾಯಗೊಂಡರೂ ಸಚಿವರು ಮತ್ತು ಶಾಸಕರು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಗೌಡ ಅವರು ಅರಣ್ಯ ಇಲಾಖೆ ಪ್ರಾಣಿಗಳನ್ನು ನಿಯಂತ್ರಿಸಲು ವಿಫಲವಾಗಿದೆ ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಪಿ. ಗುರುಸ್ವಾಮಿ ಅವರು “ಸರ್ಕಾರ ಜನಪರ ಕೆಲಸ ಮಾಡುತ್ತೇವೆ ಎಂದು ಹೇಳಿಕೊಂಡರೂ ಅಕ್ರಮ ರೆಸಾರ್ಟ್‌ಗಳ ಪರವಾಗಿ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.
ಹೆಡಿಯಾಲ ಉಪವಲಯ ಅರಣ್ಯಾಧಿಕಾರಿ ಡಿ. ಪರಮೇಶ್ ಅವರು ಮನವಿ ಸ್ವೀಕರಿಸಿ, “ಇಲ್ಲಿಯವರೆಗೆ ಎರಡು ಹುಲಿಗಳನ್ನು ಸೆರೆಹಿಡಿದಿದ್ದೇವೆ. ಇನ್ನೂ 7–8 ಹುಲಿಗಳು ಕಾರ್ಯಾಚರಣೆಯಲ್ಲಿವೆ. ಪರಿಹಾರ ನಿಧಿ ಬಂದ ಕೂಡಲೇ ರೈತರಿಗೆ ನೀಡಲಾಗುವುದು” ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
