ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
10-11-2025
ಎರಡು ವರ್ಷದಲ್ಲಿ ಜನರ ಕೈಗೆ ₹1 ಲಕ್ಷ ಕೋಟಿ — ಸಿಎಂ ಸಿದ್ದರಾಮಯ್ಯ
ಕೂಡ್ಲಿಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಮೂಲಕ ಕಳೆದ ಎರಡು ವರ್ಷಗಳಲ್ಲಿ ಸುಮಾರು ₹1 ಲಕ್ಷ ಕೋಟಿಯ ನೆರವು ನೇರವಾಗಿ ಜನರ ಕೈಗೆ ತಲುಪಿದೆಯೆಂದು ತಿಳಿಸಿದ್ದಾರೆ.
ಕೂಡ್ಲಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ನಾವು ನೀಡಿದ ಗ್ಯಾರಂಟಿಗಳು ಕೇವಲ ಚುನಾವಣಾ ಘೋಷಣೆಗಳಲ್ಲ, ಜನರ ಬದುಕು ಸುಧಾರಿಸುತ್ತಿವೆ,” ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಗೃಹಿಣಿಯರಿಗೆ ಹಣ ತಲುಪಿದ್ದು, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ದೊರೆತಿದೆ ಎಂದು ಸಿಎಂ ಹೇಳಿದರು.
ಬಿಜೆಪಿಯನ್ನು ಟೀಕಿಸಿದ ಅವರು, “ಕೇಂದ್ರದ ಬಿಜೆಪಿ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಮಾಡಿದರೆ, ನಮ್ಮ ಸರ್ಕಾರ ಹೆಚ್ಚುವರಿ ಹಣ ನೀಡಿ ಬೆಳೆಗಾರರನ್ನು ಕಾಪಾಡಿದೆ,” ಎಂದು ಹೇಳಿದರು.
ಕೂಡ್ಲಿಗಿ ಕ್ಷೇತ್ರಕ್ಕೆ ಕಳೆದ ಎರಡು ವರ್ಷಗಳಲ್ಲಿ ₹1,750 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವುದಾಗಿ ತಿಳಿಸಿದ ಸಿಎಂ, ಶಾಸಕ ಶ್ರೀನಿವಾಸ್ ಹಾಗೂ ಸಂಸದ ತುಕಾರಾಂ ಅವರ ಶ್ರಮವನ್ನು ಶ್ಲಾಘಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
