ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
17-05-2025
ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ!
ದೋಹಾ: ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ 2025ರಲ್ಲಿ 90.23 ಮೀಟರ್ ಜಾವೆಲಿನ್ ಎಸೆದು ಭಾರತದ ಪರ ಇತಿಹಾಸ ಬರೆದಿದ್ದಾರೆ.
ಶುಕ್ರವಾರ ಕತಾರ್‌ನ ಸುಹೀಮ್ ಬಿನ್ ಹಮದ್ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಸರಣಿಯ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮತ್ತೊಮ್ಮೆ 90 ಮೀಟರ್ ಜಾವೆಲಿನ್ ಎಸೆಯುವ ಮೂಲಕ ತನ್ನ ಹಳೆ ದಾಖಲೆಯನ್ನೇ ಮುರಿದಿದ್ದಾರೆ.
ನೀರಜ್ ಚೋಪ್ರಾ 88.44 ಮೀಟರ್ ಜಾವೆಲಿನ್ ಎಸೆದು ಆರಂಭಿಕ ಮುನ್ನಡೆ ಸಾಧಿಸಿದರು. ನೀರಜ್ ಚೋಪ್ರಾ ಕೊನೆಯ ಎಸೆತದಲ್ಲಿ 90.23 ಮೀಟರ್ ದೂರಕ್ಕೆ ಎಸೆದು ದೋಹಾ ಡೈಮಂಡ್ ಲೀಗ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾರತದ ಇನ್ನೋರ್ವ ಕ್ರೀಡಾಪಟು ಕಿಶೋರ್ ಜೆನಾ ಪುರುಷರ ಜಾವೆಲಿನ್ ಥ್ರೋ ಭಾಗಿಯಾಗಿದ್ದರು.
ನಿರಾಜ್ ಚೋಪ್ರಾ 990.23 ಮೀಟರ್ ಎಸೆದರೂ ಎರಡನೇ ಸ್ಥಾನ ಪಡೆದರು. ಜರ್ಮನಿಯ ಜೂಲಿಯನ್ ವೆಬರ್ ತಮ್ಮ ಅಂತಿಮ ಪ್ರಯತ್ನದಲ್ಲಿ 91.06 ಮೀಟರ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದರು.
