ಜೆ.ಡಿ.ಎಸ್ ಪ್ರಾದೇಶಿಕ ಪಕ್ಷದ ಅಸ್ಮಿತೆಗೆ ಸ್ವಂತ ಬಲದ ಪೈಪೋಟಿ.
ರಾಜ್ಯ ವಿಧಾನ ಸಭೆ ಹಾಗೂ ಲೋಕಸಭೆಯ ಚುನಾವಣೆಗೆ ಮಾತ್ರ ಜೆ.ಡಿ.ಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ.ಆದರೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆ.ಡಿಎಸ್ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸಲಿದೆ. ಎಂದು ಮಾಜಿ ಪ್ರಧಾನಿ ಜೆ.ಡಿ.ಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಜೆ.ಡಿಎಸ್ ಪಕ್ಷ ಪ್ರಾದೇಶಿಕ ಪಕ್ಷವಾಗಿದ್ದು ಜನತೆಯ ಆಶಾ ಭಾವನೆ ಮತ್ತು ರಾಜದಲ್ಲಿ ತಮ್ಮದೇ ಪ್ರಾಬಲ್ಯವನ್ನ ಪಕ್ಷ ಹೊಂದಿದೆ ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿನ ಮೈತ್ರಿ ಕಷ್ಟಸಾಧ್ಯ ಎಂದಿದ್ದಾರೆ.
ಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳಲ್ಲಿ ಜೆ.ಡಿಎಸ್ ಪಕ್ಷಕ್ಕೆ ಒಂದು ಸ್ಥಾನ ಮೀಸಲಿರಿಸಲು ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಸ್ವಂತ ಬಲದ ಮೇಲೆ ಪಕ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿ ಗೆದ್ದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. .
ಈ ಮೊದಲು ಬಿಜೆಪಿ ಮತ್ತು ಜೆಡಿಎಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ನಮ್ಮ ಮೈತ್ರಿ ಮುಂದುವರಿಯುತ್ತದೆ ಎಂಬ ಹೇಳಿಕೆ ನೀಡಿದ್ದರು
ಅದಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ 2028 ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಅಧಿಕ ಸ್ಥಾನ ಪಡೆದು ಬಹುಮತದೊಂದಿದೆ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸದ ನುಡಿಗಳನ್ನಾಡಿದ್ದರು. ಇದೀಗ ಜೆಡಿಎಸ್ ರಾಷ್ಟ್ರಾಧ್ಯಕ್ಚರ ಹೇಳಿಕೆಯಿಂದ ರಾಜಕೀಯ ಮೈತ್ರಿ ಕುರಿತು ಮುಂದಿನ ನಡೆ ಎನೆಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇತರೆ ಸುದ್ದಿಗಳು