ವರದಿಗಾರರು :
ಕೋಲಾರ ||
ಸ್ಥಳ :
ಕೋಲಾರ
ವರದಿ ದಿನಾಂಕ :
07-09-2025
ಕೋಲಾರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಕೋಲಾರ ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯವಾಗಿದ್ದು, ಆದರೆ ಕ್ರೀಡೆಯಲ್ಲಿ ಪಾಲ್ಗೊಂಡು ತಮ್ಮ ಆಟವನ್ನು ಪ್ರದರ್ಶಿಸುವುದು ಮುಖ್ಯಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್ ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕೋಲಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕೋಲಾರ ಇವರ ಸಹಯೋಗದೊಂದಿಗೆ 2025-26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಧ್ವಜಾರೋಹಣ ನಡೆಸಿ ನಂತರ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ತಮ್ಮ ಶಾಲಾ ದಿನಗಳಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆನೆಪನ್ನು ಸ್ಮರಿಸಿದ ಅವರು. ತಾವು ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವೆಂದು ತಿಳಿದು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದೆವು ಎಂದು ತಿಳಿಸಿದರು..
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಮಾರಪ್ಪ, ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚೌಡಪ್ಪ, ಚಂದ್ರಶೇಖರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸಿಸಂದ್ರ ಗೋಪಾಲಗೌಡ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮುರಳಿಮೋಹನ್, ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೇಶ್, ನಾಗರಾಜ್, ಮಂಜುನಾಥ್, ಬಾಬು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
