ವರದಿಗಾರರು :
ಬಸವರಾಜ ಪೂಜಾರಿ ||
ಸ್ಥಳ :
ಬೀದರ
ವರದಿ ದಿನಾಂಕ :
12-11-2025
ಬೀದರ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ
ಬೀದರ್: ಬೀದರ್ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಒದಗಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ ಜವಳೆ ಮನವಿ ಸಲ್ಲಿಸಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಕೈಗಾರಿಕೆಗಳ ಕೊರತೆಯಿಂದ ಅನೇಕ ಯುವಕರು ಉದ್ಯೋಗಕ್ಕಾಗಿ ಹೊರರಾಜ್ಯಗಳ ನಗರಗಳಿಗೆ ವಲಸೆ ಹೋಗುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಬೀದರ ನಗರದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿರುವ ಕೆಲವು ರಾಸಾಯನಿಕ ಕಾರ್ಖಾನೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತು ತ್ಯಾಜ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದು ಹೇಳಿದರು.
ಪರಿಸರ ಸ್ನೇಹಿ ಹಾಗೂ ಉದ್ಯೋಗಮುಖಿ ಕೈಗಾರಿಕೆಗಳನ್ನು ಸ್ಥಾಪಿಸುವುದು ಜಿಲ್ಲೆಯ ಯುವಕರಿಗೆ ಹೊಸ ಉದ್ಯೋಗದ ಮಾರ್ಗವನ್ನು ತೆರೆಯುವುದಲ್ಲದೆ, ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜವಳೆ ತಿಳಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
