ವರದಿಗಾರರು :
ನಾಗಭೂಷಣ ಕೆ ||
ಸ್ಥಳ :
ತುಮಕೂರು
ವರದಿ ದಿನಾಂಕ :
18-10-2025
ತುಮಕೂರಿನಲ್ಲಿ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ಕಬಡ್ಡಿ ಪಂದ್ಯಾವಳಿ ಚಾಲನೆ
ತುಮಕೂರು: ತುಮಕೂರು ಜಿಲ್ಲೆ ಕ್ರೀಡೆಗಾಗಿ ಪ್ರಸಿದ್ಧಿ ಪಡೆದಿದೆ. ಇಂದು ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಕಾರದಲ್ಲಿ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಬಡ್ಡಿ ಆಟದ ಮಹತ್ವ, ಮಾನಸಿಕ ಮತ್ತು ಶಕ್ತಿಯುತ ಬೆಳವಣಿಗೆ, ಹಾಗೂ ಭಾರತಕ್ಕೆ ಮೀರಿದ ಕಬಡ್ಡಿ ಚರಿತ್ರೆ ಕುರಿತು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಮುಂದಿನ ಅವಕಾಶಗಳಿಗೆ ಸಿದ್ಧರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪರಿವಾರದೊಂದಿಗೆ ಶಾಸಕರು ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಹಾಗೂ ಚಂದ್ರಶೇಖರ್ ಗೌಡ ಉಪಸ್ಥಿತರಿದ್ದರು.
