ವರದಿಗಾರರು :
ನಾ.ಅಶ್ವಥ್ ಕುಮಾರ್, ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
26-11-2025
ಡಿ.ಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಭಕ್ತರು ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸಿದರು
ಚಾಮರಾಜನಗರ: ಪವಾಡ ಪುರುಷ ಮಲೆ ಮಹದೇಶ್ವರ ಸನ್ನದಿಯಲ್ಲಿ, ಕೆಪಿಸಿಸಿ ಅಧ್ಯಕ್ಷರು ಮತ್ತು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವ್ಯ ಭಾವಚಿತ್ರ ಹಿಡಿದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಈ ಘಟನೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆದಿದೆ. ಅಭಿಮಾನಿಗಳು 501 ತೆಂಗಿನಕಾಯಿಗಳನ್ನು ಒಡೆದು ದೇವರಿಗೆ ಅರ್ಪಿಸಿಕೊಂಡರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಹಿಡಿದು ಹರಕೆ ಸಲ್ಲಿಸಲಾಗಿದೆ.
