ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸೌದಿ ಅರೇಬಿಯಾದಿಂದ ಕ್ರಾಂತಿಕಾರಿ ನಿರ್ಧಾರ, 73 ವರ್ಷಗಳ ಮದ್ಯ ನಿಷೇಧ ರದ್ದು! ಕಾರಣ ಏನು?
ವರದಿಗಾರರು : ಡಿ ಬಿ ರಾಜೇಂದ್ರ | ಸ್ಥಳ : ಹುಬ್ಬಳ್ಳಿ | ದಿನಾಂಕ : 27-05-2025

ಸೌದಿ ಅರೇಬಿಯಾದಿಂದ ಕ್ರಾಂತಿಕಾರಿ ನಿರ್ಧಾರ, 73 ವರ್ಷಗಳ ಮದ್ಯ ನಿಷೇಧ ರದ್ದು! ಕಾರಣ ಏನು?

ಹೈಲೈಟ್ಸ್‌: 2026ರಿಂದ ಮದ್ಯದ ಮೇಲಿನ ನಿಷೇಧವನ್ನು ಭಾಗಶಃ ತೆಗೆದುಹಾಕಲು ನಿರ್ಧರಿಸಿದೆ ಕಟ್ಟರ್ ಇಸ್ಲಾಮಿಕ್ ರಾಷ್ಟ್ರ ಸೌದಿ ಅರೇಬಿಯಾ 2034ರ ಫಿಫಾ ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಸೆಳೆಯಲು ಸೌದಿ ಅರೇಬಿಯಾದಿಂದ ಈ ಕ್ರಮ ವಿಷನ್ 2030ರ ಭಾಗವಾಗಿ, ಆಯ್ದ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಈ ಮೂಲಕ 73 ವರ್ಷಗಳ ನಿಷೇಧವನ್ನು ಸಡಿಲಿಸಲು ತೀರ್ಮಾನಿಸಿದೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ನೇತೃತ್ವದ ಸೌದಿ ಅರೇಬಿಯಾ

ಕಟ್ಟರ್ ಇಸ್ಲಾಮಿಕ್ ರಾಷ್ಟ್ರ ಸೌದಿ ಅರೇಬಿಯಾ 2026 ರಿಂದ ಮದ್ಯದ ಮೇಲಿನ ನಿಷೇಧವನ್ನು ಭಾಗಶಃ ತೆಗೆದುಹಾಕಲು ನಿರ್ಧರಿಸಿದೆ. 2034ರ ಫಿಫಾ ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಸೆಳೆಯಲು ಈ ಕ್ರಮ ಕೈಗೊಳ್ಳಲಾಗಿದೆ. ವಿಷನ್ 2030ರ ಭಾಗವಾಗಿ, ಆಯ್ದ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಮೂಲಕ 73 ವರ್ಷಗಳ ನಿಷೇಧವನ್ನು ಸಡಿಲಿಸಲು ತೀರ್ಮಾನಿಸಿದೆ.

2026ರಿಂದಲೇ ಇದು ಆರಂಭವಾಗಲಿದೆ. 2034ರ ಫಿಫಾ ವಿಶ್ವಕಪ್‌ಗೆ ಸೌದಿ ಅರೇಬಿಯಾ ಆತಿಥ್ಯ ವಹಿಸಲಿದ್ದು, ಇದಕ್ಕೂ ಮುನ್ನ ಜಾಗತಿಕ ಪ್ರವಾಸಿಗರನ್ನು ಸೆಳೆಯಲು ಈ ನಿರ್ಧಾರಕ್ಕೆ ಬಂದಿದೆ.

ವಿಷನ್ 2030 ಉಪಕ್ರಮದ ಭಾಗವಾಗಿ ಈ ಬದಲಾವಣೆಗೆ ಸೌದಿ ಅರೇಬಿಯಾ ನಾಂದಿ ಹಾಡುತ್ತಿದ್ದು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಕೆಫೆಗಳಂತಹ ಉನ್ನತ ಮಟ್ಟದ ಸ್ಥಳಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಿದೆ.

ಈ ಮೂಲಕ ಪ್ರಪಂಚದ ಅತ್ಯಂತ ಸಂಪ್ರದಾಯವಾದಿ ದೇಶಗಳಲ್ಲಿ ಒಂದಾದ ಸೌದಿ ಅರೇಬಿಯಾದಲ್ಲಿ 73 ವರ್ಷಗಳ ಮದ್ಯ ನಿಷೇಧಕ್ಕೆ ತೆರೆ ಬೀಳಲಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟದ ಆಯೋಜನೆಗೂ ಮುನ್ನ ಸೌದಿ ಪ್ರವಾಸಿ ಸ್ಥಳಗಳಲ್ಲಿ ಮದ್ಯದ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿದೆ.

ವಿಷನ್ 2030 ಕಾರ್ಯಕ್ರಮವು, ಸೌದಿ ಅರೇಬಿಯಾದ ಆರ್ಥಿಕತೆಯನ್ನು ವೈವಿಧ್ಯಗೊಳಿಸುವ, ಅಂತಾರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸುವ ಮತ್ತು ಎಕ್ಸ್‌ಪೋ 2030 ಹಾಗೂ ಫಿಫಾ ವಿಶ್ವಕಪ್ 2034ರಂತಹ ದೊಡ್ಡ ಕಾರ್ಯಕ್ರಮಗಳಿಗಾಗಿ ದೇಶದ ಪ್ರವಾಸೋದ್ಯಮ ಮೌಲ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಹೊಸ ಕಾನೂನಿನ ಅಡಿಯಲ್ಲಿ ಬಿಯರ್, ವೈನ್ ಮತ್ತು ಸೈಡರ್ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಸ್ಪಿರಿಟ್ಸ್ ಮತ್ತು ಹಾರ್ಡ್ ಲಿಕ್ಕರ್‌ ಮಾರಾಟಕ್ಕೆ ಅನುಮತಿ ಇರುವುದಿಲ್ಲ ಹಾಗಾಂಥ ಖಾಸಗಿ ಆವರಣಗಳು, ಸಾರ್ವಜನಿಕ ಸ್ಥಳಗಳು ಮತ್ತು ಪರವಾನಗಿ ಇಲ್ಲದ ಆವರಣಗಳಲ್ಲಿ ಮದ್ಯಪಾನ ಮಾಡುವಂತಿಲ್ಲ. ಮನೆಯಲ್ಲಿ ಮದ್ಯ ತಯಾರಿಸುವುದನ್ನೂ ನಿಷೇಧಿಸಲಾಗಿದೆ. ಸಾಂಸ್ಕೃತಿಕ ಮೌಲ್ಯಗಳನ್ನು ರಕ್ಷಿಸಲು, ತರಬೇತಿ ಪಡೆದ ಸಿಬ್ಬಂದಿಯನ್ನು ಹೊಂದಿರುವ ಪರವಾನಗಿ ಪಡೆದ ಆವರಣಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಸರ್ಕಾರದ ಮೂಲಗಳು ಹೇಳಿವೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+