ವರದಿಗಾರರು :
ತಾವರೆಕೆರೆ ತೇಜಸ್ ||
ಸ್ಥಳ :
Bengaluru
ವರದಿ ದಿನಾಂಕ :
05-12-2025
ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಪ್ಪನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಉದ�
ತಾವರೆಕೆರೆ ಗ್ರಾಮ ಪಂಚಾಯಿತಿ ವರ್ಗ 1 ರ ಅನುದಾನದಲ್ಲಿ ಸುಮಾರು 5 ಲಕ್ಷ ವೆಚ್ಚದಲ್ಲಿ ನೂತನ ಸರ್ಕಾರಿ ನ್ಯಾಯಾ ಬೆಲೆ ಅಂಗಡಿ ಕಟ್ಟಡವನ್ನು ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷರಾದ ಟಿಎಸ್ ಆರ್ ರಾಜಶೇಖರ್ ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡಿ, ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಧಿಕಾರಿಗಳು ತಲುಪಿಸುವುದು ನಮ್ಮ ಕರ್ತವ್ಯವಾಗಿದೆ. ಅದರಂತೆ ಇಂದು ಮಂಚಪ್ಪನಹಳ್ಳಿ ಗ್ರಾಮಸ್ಥರಿಗೆ ನ್ಯಾಯ ಬೆಲೆ ಅಂಗಡಿಯನ್ನು ತೆರೆದು ಆಹಾರ ಪದಾರ್ಥಗಳನ್ನು ವಿತರಣೆ ಮಾಡಲಾಗಿದೆ.
ಗ್ರಾಮಸ್ಥರು, ಸುಮಾರು 3 ಕಿಲೋ ಮೀಟರ್ ನಡೆದುಕೊಂಡು ಹೋಗಿ ಪಡಿತರ ಆಹಾರ ಪದಾರ್ಥಗಳನ್ನು ಪಡೆದುಕೊಂಡು ಬರಬೇಕಿತ್ತು. ಇದನ್ನು ಅರಿತ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪಂಚಾಯಿತಿ ಅವರು ಗ್ರಾಮಸ್ಥರಿಗೆ ಪಡಿತರ ಆಹಾರ ಪದಾರ್ಥಗಳನ್ನು ಪಡೆದುಕೊಳ್ಳಲು ಗ್ರಾಮದಲ್ಲಿಯೇ ನೂತನ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಿದ್ದಾರೆ. ಇದರಿಂದ ಗ್ರಾಮದಲ್ಲಿಯೇ ವಿತರಣೆ ಮಾಡಲು ನೂತನ ನ್ಯಾಯಾ ಬೆಲೆ ಅಂಗಡಿ ಉದ್ಘಾಟನೆ ಮಾಡಲಾಗಿದೆ ಎಂದರು.
ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಸುಧಾಕರ್ ಮಾತನಾಡಿ, ಇನ್ನೂ ಮುಂದೆ ಗ್ರಾಮದಲ್ಲಿರುವ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳಿಗೆ ಪ್ರತಿ ತಿಂಗಳು ಇದೇ ಗ್ರಾಮದಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ ಗ್ರಾಮಸ್ಥರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು. ಗ್ರಾಮದಲ್ಲಿ ಈಗಾಗಲೇ 94% ರಷ್ಟು ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಮಾದರಿ ಗ್ರಾಮವನ್ನಾಗಿ ಮಾಡಲಾಗಿದೆ ಎಂದರು.
