ವರದಿಗಾರರು :
ಬಸವರಾಜ ಪೂಜಾರಿ, ||
ಸ್ಥಳ :
ಬೀದರ
ವರದಿ ದಿನಾಂಕ :
11-09-2025
“ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ”
ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ರವಿವಾರ ಬೀದರ ಜಿಲ್ಲೆಯ ಕಮಠಾಣ, ಬಗದಲ್, ಗೋಧಿ ಹಿಪ್ಪರಗಾ, ಮುಡಬಿ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ . ಜಿಲ್ಲೆಯ ಅಧಿಕಾರಿಗಳಿಂದ ಬೆಳೆ ಹಾನಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಇಂದು ನಡೆಯುವ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಅತಿವೃಷ್ಟಿಯಿಂದ ಆದಂತಹ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ರಮ್ಯಾ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ , ಸಹಾಯಕ ಆಯುಕ್ತರು, ತಹಸಿಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
