ವರದಿಗಾರರು :
ರಮೇಶ್ ಅಂಗಡಿ ||
ಸ್ಥಳ :
ಬಾಗಲ್ಕೋಟ್
ವರದಿ ದಿನಾಂಕ :
10-11-2025
ನಾಗತಿಹಳ್ಳಿ ಮಂಜುನಾಥ್ ಚಿತ್ರದುರ್ಗ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆ
ಹೊಸದುರ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ನಾಗತಿಹಳ್ಳಿ ಮಂಜುನಾಥ್ ಅವರು ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ಚಿತ್ರದುರ್ಗದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅವರು 88 ಮತಗಳನ್ನು ಪಡೆದು ಜಯಗಳಿಸಿದರು. ಮಂಜುನಾಥ್ ಅವರು ಕಳೆದ 25 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ಅವಧಿಯಲ್ಲಿ ಸಂಘದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಮುಂಚಿನ ಎರಡು ಅವಧಿಗಳಲ್ಲಿ ಜಿಲ್ಲಾ ಘಟಕದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಈ ಬಾರಿ ನಡೆದ ಚುನಾವಣೆಯಲ್ಲಿ ತಾಲೂಕು ಪತ್ರಕರ್ತ ವಿಶ್ವನಾಥ್ ಶ್ರೀರಾಂಪುರ ಅವರು 82 ಮತಗಳನ್ನು ಪಡೆದು ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆ ಸುಗಮವಾಗಿ ನೆರವೇರಿದ್ದು, ಜಿಲ್ಲಾ ಘಟಕದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು. ಜಯಶೀಲರಾದ ಮಂಜುನಾಥ್ ಅವರಿಗೆ ಸಹೋದ್ಯೋಗಿಗಳು ಹಾಗೂ ಅಭಿಮಾನಿಗಳು ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
