ವರದಿಗಾರರು :
ನರೇಂದ್ರ ಬಾಬು ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
04-03-2025
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್ ಸಂಚಾರ ನಿಷೇಧ !
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ನಿಷೇಧಿಸಲಾಗಿದೆ. ಇತ್ತೀಚಿಗೆ ರಸ್ತೆಯಲ್ಲಿ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿತ್ತು. ಈ ಬೆನ್ನೆಲ್ಲೆ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ ಎಕ್ಸ್‌ಪ್ರೆಸ್‌ವೇ ಗಳಲ್ಲಿ ವಾಹನಗಳು 120 ಕಿಮೀ ವೇಗದಲ್ಲಿ ಸಂಚಾರ ನಡೆಸುತ್ತವೆ. ದ್ವಿಚಕ್ರ ವಾಹನಗಳಿಂದ ಅಪಘಾತ ಸಾಧ್ಯತೆ ಇರುತ್ತದೆ. ಹೀಗಾಗಿ, ವಾಹನ ನಿಷೇಧ ಮಾಡಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕದ 2 ನೇ ಎಕ್ಸ್‌ಪ್ರೆಸ್ ವೇ ಆದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಷೇಧಿಸಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಭಾನುವಾರ ರಾತ್ರಿ ನಾಲ್ಕು ಮಂದಿ ಅಪಘಾತವಾಗಿ ಮೃತಪಟ್ಟಿದ್ದರು. ಈ ಬೆನ್ನಲ್ಲೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವೇಶ ಮತ್ತು ನಿರ್ಗಮನ ದ್ವಾರಗಳ ಬಳಿ ಬೈಕ್‌ಗಳ ಪ್ರವೇಶವನ್ನು ನಿಷೇಧಿಸಲು ಸಂಬಂಧಪಟ್ಟ ಸಿಬ್ಬಂದಿಗೆ ಎನ್‌ಎಚ್‌ಎಐ ಮಾಹಿತಿ ನೀಡಿದೆ.
ಈ ಬಗ್ಗೆ ಎನ್‌ಎಚ್‌ಎಐ ಅಧಿಕಾರಿ ಮಾಹಿತಿ ನೀಡಿದ್ದು, "ಈಗಾಗಲೇ ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ಬೈಕ್‌ಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಅಪಘಾತ ಮುನ್ನೆಚ್ಚರಿಕಾ ಕ್ರಮವಾಗಿ ದ್ವಿಚಕ್ರ ವಾಹನಗಳನ್ನು ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಬಿಡಬಾರದು ಎಂದು ಈಗಾಗಲೇ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್‌ಗಳ ಬಳಕೆಯನ್ನು ನಿಷೇಧಿಸುವ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು " ಎಂದು ತಿಳಿಸಿದ್ದಾರೆ.
