ವರದಿಗಾರರು :
ಹರೀಶ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
27-10-2025
ಗುಂಡಿನ ದಾಳಿ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಪ್ರಾಣಾಪಾಯದಿಂದ ಪಾರ
ಬೆಂಗಳೂರು, ಅಕ್ಟೋಬರ್ 27 – ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಅವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದ ಘಟನೆ ವರದಿಯಾಗಿದೆ. ಮನೆ ಬಳಿ ಮಾತನಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಏಕಾಏಕಿ ಗುಂಡು ಹಾರಿಸಿದ್ದು, ಸಲೀಂ ಅವರ ಕೈಗೆ ಗಾಯವಾಗಿದೆ. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
