ವರದಿಗಾರರು :
ರುದ್ರೇಶ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
06-11-2025
ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ 121 ಕ್ಷೇತ್ರಗಳಲ್ಲಿ ಮತದಾನ
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ನಡೆಯಲಿದೆ. ಒಟ್ಟು 1314 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, 3.75 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದ ಅಭ್ಯರ್ಥಿಗಳ ಪೈಕಿ ಶೇಕಡಾ 36ರಷ್ಟು ಮಂದಿಯ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.
ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ತೇಜ ಪ್ರತಾಪ್ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ. ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
