ವರದಿಗಾರರು :
ಗಜೇಂದ್ರ, ||
ಸ್ಥಳ :
ದೇವನಹಳ್ಳಿ
ವರದಿ ದಿನಾಂಕ :
05-12-2025
ಯಲಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಚುನಾವಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಿತು. ಹಿಂದಿನ ಅಧ್ಯಕ್ಷ ರಘುವೀರ್ ಮತ್ತು ಉಪಾಧ್ಯಕ್ಷ ಅನುಪಮ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರಿಂದ ಈ ಎರಡು ಸ್ಥಾನಗಳು ತೆರವಾಗಿದ್ದವು. ಚುನಾವಣಾಧಿಕಾರಿ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಎಫ್. ಕುರಿ ಮತ್ತು ಮೇಕೆ ರೈತ ಉತ್ಪಾದಕರ ಕಂಪನಿಯ ನಿರ್ದೇಶಕ ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಮ್ಮ ಅವರು ನಾಮಪತ್ರವನ್ನು ಸಲ್ಲಿಸಿದರು. ಇವರ ಹೊರತುಪಡಿಸಿ ಇತರ ಸದಸ್ಯರಿಂದ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ, ಪ್ರಕಾಶ್ ಅವರು ಅಧ್ಯಕ್ಷರಾಗಿ ಹಾಗೂ ಲಕ್ಷ್ಮಮ್ಮ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಭಾಸ್ಕರ್ ಘೋಷಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ರಘುವೀರ್, ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯ ಅನುಪಮ, ನಿರ್ದೇಶಕರಾದ ಮುನಿರಾಜು, ರಾಮಾಂಜನಯ್ಯ, ಬಸವರಾಜ್, ಸಂಪಂಗಿರಾಮಯ್ಯ, ಆನಂದ್, ಸವಿತಾ, ಮುನಿರಾಜು, ಭೈರಪ್ಪ, ನಾರಾಯಣಸ್ವಾಮಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಕೇಶವ್ ಉಪಸ್ಥಿತರಿದ್ದರು ಮತ್ತು ಅವಿರೋಧ ಆಯ್ಕೆಗೆ ಸಹಕರಿಸಿದರು.
