ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
20-04-2025
ಕೊಹ್ಲಿ, ಪಡಿಕ್ಕಲ್ ಮಿಂಚು- ‘ಕಿಂಗ್ಸ್’ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ
ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಅಮೋಘ ಡಬಲ್ ಫಿಫ್ಟಿ ಆಟಕ್ಕೆ ಪಂಜಾಬ್ ಕಿಂಗ್ಸ್ ಸೋತು ಶರಣಾಯಿತು. ಕಿಂಗ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ತವರಿನ ಸೋಲಿಗೆ ಸೇಡು ತೀರಿಸಿಕೊಂಡಿದೆ.
ಮೊಹಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಪಂಜಾಬ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. 157 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 18.5 ಓವರ್‌ಗೆ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಗೆದ್ದು ಬೀಗಿತು.
