ವರದಿಗಾರರು :
ಎಂ. ಬಸವರಾಜ್ ||
ಸ್ಥಳ :
ವಿಜಯನಗರ
ವರದಿ ದಿನಾಂಕ :
18-10-2025
ಹುಣಸೆ–ಶೇಂಗಾ ಸಂಸ್ಕರಣೆ ಘಟಕ ಉದ್ಘಾಟನೆ : ಗ್ರಾಮೀಣ ಅಭಿವೃದ್ಧಿಗೆ ಹೊಸ ಚೈತನ್ಯ
ಕೂಡ್ಲಿಗಿ: ವಿಜನಗರ ಜಿಲ್ಲೆಯ ಕಸಾಪುರ ಗ್ರಾಮದಲ್ಲಿ ಎಂಪಿಲಾಕ್ಸ್ ಮತ್ತು ನಬಾರ್ಡ್ (ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ) ಸಹಕಾರದೊಂದಿಗೆ ₹4.35 ಕೋಟಿ ವೆಚ್ಚದಲ್ಲಿ ನಿರ್ಮಿಸಲ್ಪಟ್ಟ “ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ” (ಹುಣಸೆ ಮತ್ತು ಶೇಂಗಾ ಸಂಸ್ಕರಣ ಘಟಕ)ವನ್ನು ಅಕ್ಟೋಬರ್ 17, 2025 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ಅವರು ಭಾಗವಹಿಸಿ ಜನರನ್ನುದ್ದೇಶಿಸಿ ಮಾತನಾಡಿದರು.
ಗುಡೇಕೋಟೆ ಭಾಗದ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯಿಂದ ಈ ಯೋಜನೆ ಕಾರ್ಯಗತವಾಗಿದೆ ಎಂದು ಹೇಳಿದರು.
ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿ ನಿರ್ಮೂಲಗೊಳಿಸುವ ಅಗತ್ಯವನ್ನು ಒತ್ತಿಹೇಳಿದರು.
ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಮತ್ತು ಶಿಕ್ಷಣ–ಆರೋಗ್ಯ ಸೌಲಭ್ಯಗಳ ಕೊರತೆಯ ಬಗ್ಗೆ ಚಿಂತನೆ ವ್ಯಕ್ತಪಡಿಸಿದರು.
ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಏಕಲವ್ಯ ಮಾದರಿ ಶಾಲೆ ಸ್ಥಾಪಿಸಲು ಮಾನ್ಯ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದರು.
ಕಾರ್ಯಕ್ರಮದ ಅಂತ್ಯದಲ್ಲಿ ಡಾ. ಶ್ರೀನಿವಾಸ್ ಎನ್.ಟಿ. ಹಾಗೂ ಅವರ ಧರ್ಮಪತ್ನಿ ಡಾ. ಪುಷ್ಪಾ ಶ್ರೀನಿವಾಸ್ ಅವರು ಮಾನ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಂಬಳಿ ಮತ್ತು ಉಡುಗೊರೆ ನೀಡಿ ಗೌರವಿಸಿದರು.
ಕ್ಷೇತ್ರದ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಕೌಶಲ್ಯಾಭಿವೃದ್ಧಿಗೆ ಅನುದಾನ ಒದಗಿಸುವ ಕುರಿತು ಮನವಿ ಸಲ್ಲಿಸಲಾಯಿತು.
ಸಭೆಯಲ್ಲಿ ಹಾಜರಿದ್ದವರು: ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಸಂಸದ ಈ. ತುಕಾರಾಮ್, ಶಾಸಕಿ ಲತಾ ಮಲ್ಲಿಕಾರ್ಜುನ, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ., ಹಣಕಾಸು ಕಾರ್ಯದರ್ಶಿ ಎಂ. ನಾಗರಾಜು, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ತಹಶೀಲ್ದಾರ ನೇತ್ರಾವತಿ, ಗ್ರಾಮಪಂಚಾಯತ್ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ರೈತರು, ಮಹಿಳೆಯರು ಹಾಗೂ ಸಾರ್ವಜನಿಕರು.
ಗ್ರಾಮೀಣ ರೈತರ ಆರ್ಥಿಕ ಬಲವರ್ಧನೆ, ಮಹಿಳೆಯರ ಸಬಲೀಕರಣ ಮತ್ತು ಶಿಕ್ಷಣದ ಬೆಳವಣಿಗೆಗೆ ಮತ್ತೊಂದು ಪ್ರಗತಿಯ ಹೆಜ್ಜೆ.
