ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ಹಿರಿಯೂರು
ವರದಿ ದಿನಾಂಕ :
27-10-2025
ಹಿರಿಯೂರು ವಾಣಿವಿಲಾಸ ಜಲಾಶಯ: ಪ್ರವಾಸಿಗ ನೀರಿನಲ್ಲಿ ಕೊಚ್ಚಿ ರಕ್ಷಣೆ
ತಾಲೂಕಿನ ವಾಣಿವಿಲಾಸ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಾನುವಾರ ಕೋಡಿ ಜಾಗದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಪ್ರವಾಸಿಗನೊಬ್ಬ ನೀರಿನಲ್ಲಿ ಇಳಿದು ಹುಚ್ಛಾಟ ಮೆರೆದ ಹಿನ್ನೆಲೆಯಲ್ಲಿ ಹೊರಹರಿವಿನ ಹೊಡೆತಕ್ಕೆ ವ್ಯಕ್ತಿ ಕೊಚ್ಚಿ ಹೋಗಿದ್ದರ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ.
ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಕೊಡಿ ಜಾಗದಲ್ಲಿ ಸಾರ್ವಜನಿಕ ಹೋಗದಂತೆ ಇದೀಗ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ನೀರಿನಲ್ಲಿ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
