ವರದಿಗಾರರು :
ವರದಿ ಸಂಗನಗೌಡ ಗಬಸಾವಳಗಿ ||
ಸ್ಥಳ :
ತಾಳಿಕೋಟಿ
ವರದಿ ದಿನಾಂಕ :
27-10-2025
ಬೊಮ್ಮನಹಳ್ಳಿಯಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಆರಂಭ
ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಯೂನಿಕ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಎರಡು ದಿನಗಳ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆರಂಭಗೊಂಡಿತು. ಕಾರ್ಯಕ್ರಮವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಉದ್ಘಾಟಿಸಿದರು.
ಕೆಸರಟ್ಟಿಯ ಸೋಮಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಅಧ್ಯಕ್ಷೆ ಸರೋಜಿನಿ ಮಸರಕಲ್, ಮಲ್ಲನಗೌಡ ಪಾಟೀಲ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಸಂಜೀವ್ ಹಜೇರಿ ಭಾಗವಹಿಸಿದರು. ಗ್ರಾಮಸ್ಥರು ಮತ್ತು ಕ್ರೀಡಾಭಿಮಾನಿಗಳು ಉತ್ಸಾಹದಿಂದ ಭಾಗಿಯಾಗಿದರು.
