ತುಮಕೂರಿನಲ್ಲಿ ಧರ್ಮಭೇದ: ಶಿಕ್ಷಕಿ ಸಮೀಕ್ಷೆಗೆ ಅವಕಾಶ ವಂಚನೆ!”
ತುಮಕೂರು: ಸರ್ಕಾರದ ಆದೇಶದಂತೆ ಸಮೀಕ್ಷೆ ಮಾಡಲು ತೆರಳಿದ್ದ ಶಿಕ್ಷಕಿಯೊಬ್ಬರು ಧರ್ಮದ ಹೆಸರಿನಲ್ಲಿ ಅವಮಾನಕ್ಕೆ ಒಳಗಾಗಿ, ತಮ್ಮ ಕರ್ತವ್ಯ ನಿರ್ವಹಿಸಲು ಅವಕಾಶ ಪಡೆಯದೆ ಗಲಾಟೆಗೆ ಒಳಗಾಗಿದ್ದಾರೆ. ಈ ಘಟನೆ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.
ವಿಡಿಯೋದಲ್ಲಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಶಿಕ್ಷಕಿ ಎಂಬ ಕಾರಣಕ್ಕೆ ಅವರಿಗೆ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿಲ್ಲ ಎಂದು ಸ್ಪಷ್ಟವಾಗಿ ಕಾಣುತ್ತಿದೆ. ಸ್ಥಳೀಯರು ಮತ್ತು ಸಾಮಾಜಿಕ ಕಾರ್ಯಕರ್ತರು ಸಮುದಾಯ ಆಧಾರಿತ ಭೇದಭಾವವನ್ನು ತಡೆಯುವ ಅಗತ್ಯವಿದೆ ಎಂದು ಅಭಿಪ್ರಾಯಪಡುತ್ತಿದ್ದಾರೆ.
ಇತರೆ ಸುದ್ದಿಗಳು