ವಿಜಯನಗರ Cylinder ದುರಂತ: ಹಾಲಪ್ಪ–ಗಂಗಮ್ಮ ಜೀವ ಬಲಿ, 5 ಲಕ್ಷ ರೂ. ಪರಿಹಾರ
ಸನ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಗಾದಿಗನೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟದ ಪ್ರಕರಣದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳು ದುರಂತವಾಗಿ ಮೃತಪಟ್ಟಿದ್ದಾರೆ. ಮೃತರು ಹಾಲಪ್ಪ ಹಾಗೂ ಗಂಗಮ್ಮ ಎಂದು ಗುರುತಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಸರ್ಕಾರದ ಪರವಾಗಿ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು.
ಘಟನೆಯಲ್ಲಿ ಹಾನಿಗೊಳಗಾದ ಮನೆಯ ಮರುನಿರ್ಮಾಣವನ್ನು ವೈಯಕ್ತಿಕ ವೆಚ್ಚದಲ್ಲಿ ಮಾಡಿಕೊಡುವುದಾಗಿ ಸಚಿವರು ಭರವಸೆ ನೀಡಿದರು. ಮೃತರ ಪಾರ್ಥಿವ ಶರೀರಗಳನ್ನು ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿಕೊಟ್ಟ ಅವರು, ಅಂತ್ಯಕ್ರಿಯೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ ಅವರಿಗೆ ಸೂಚಿಸಿದರು.
ಇತರೆ ಸುದ್ದಿಗಳು