ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
27-03-2025
ಪೂರನ್-ಮಾರ್ಷ್ ಸಿಡಿಲಬ್ಬರದ ಬ್ಯಾಟಿಂಗ್ ಹೈದರಾಬಾದ್ ಧೂಳೀಪಟ! LSGಗೆ 5 ವಿಕೆಟ್ಗಳ ಭರ್ಜರಿ ಜಯ!
ಹೈದರಾಬಾದ್: ಲಕ್ನೋ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಅವರು ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿ ಈ ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.
ಸನ್‌ರೈಸರ್ಸ್ ವಿರುದ್ಧ ಕೇವಲ 18 ಎಸೆತಗಳಲ್ಲಿ 50 ರನ್ ಸಿಡಿಸಿ ಪೂರನ್ ಸಾಧನೆ ಮಾಡಿದ್ದಾರೆ. 4 ರನ್‌ಗೆ 1 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಆಗಮಿಸಿದ ಪೂರನ್ ಬೌಂಡರಿ, ಸಿಕ್ಸ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಪೂರನ್ ಔಟಾದಾಗ ತಂಡದ ಮೊತ್ತ 120 ಆಗಿತ್ತು. ಈ ಪೈಕಿ ಪೂರನ್ ಒಬ್ಬರೇ 70 ರನ್ (26 ಎಸೆತ, 6 ಬೌಂಡರಿ, 6 ಸಿಕ್ಸ್) ಚಚ್ಚಿದ್ದರು.
2025ರ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರು *ಪೂರನ್ (ಎಲ್‌ಎಸ್‌ಜಿ) – 50 ರನ್, 18 ಎಸೆತ, *ಮಾರ್ಷ್ (ಎಲ್‌ಎಸ್‌ಜಿ) – 50 ರನ್, 21 ಎಸೆತ, *ಹೆಡ್(ಎಸ್‌ಆರ್‌ಹೆಚ್) – 50 ರನ್, 21 ಎಸೆತ.
ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ಜೈಸಸ್ವಾಲ್ 13 ಎಸೆತದಲ್ಲಿ ಅರ್ಧಶತಕ ಸಿಡಿಸಿದರೆ ಕೆಎಲ್ ರಾಹುಲ್ 14 ಎಸೆತದಲ್ಲಿ 50 ಹೊಡೆದಿದ್ದಾರೆ.
