ಭೀಕರ ಅಪಘಾತ: ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಮೂವರು ಸ್ಥಳದಲ್ಲೇ ಸಾವು
ಬೀದರ್, ನ.5: ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನಾಥಪುರ ಗ್ರಾಮದ ನಿವಾಸಿಗಳು ದೇವರ ದರ್ಶನ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ವೇಳೆ, ಅವರು ಪ್ರಯಾಣಿಸುತ್ತಿದ್ದ ಕಾರು ಡಿಟಿಡಿಸಿ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ನವೀನ (25), ರಾಚಪ್ಪ (45) ಮತ್ತು ನಾಗರಾಜ (40) ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಕಾಶಿನಾಥ ಮತ್ತು ಪ್ರತಾಪ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಡಿಟಿಡಿಸಿ ವಾಹನ ಎರಡೂ ನುಜ್ಜುಗುಜ್ಜಾಗಿವೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬ ಹಾಗೂ ಗ್ರಾಮದಲ್ಲಿ ಶೋಕದ ಮಡುಗಟ್ಟಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
ಇತರೆ ಸುದ್ದಿಗಳು