ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳ ಕ್ರೀಡಾಕೂಟ ಭವ್ಯ ಉದ್ಘಾಟನೆ
ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸಿರುತ್ತದೆ ಎಂಬ ಸಂದೇಶವನ್ನು ಒತ್ತಿ ಹೇಳುತ್ತಾ, ಬೆಳಗಾವಿ ಜಿಲ್ಲಾ ಪಂಚಾಯಿತಿ ತನ್ನ 15 ತಾಲೂಕುಗಳ 517 ಗ್ರಾಮ ಪಂಚಾಯತಿಗಳ ಎಲ್ಲಾ ಸಿಬ್ಬಂದಿಯ ಮನಸ್ಸು-ದೇಹದ ಒತ್ತಡವನ್ನು ತಣಿಸಲು ಮೂರು ದಿನಗಳ ಕ್ರೀಡಾಕೂಟವನ್ನು ಆಯೋಜಿಸಿದೆ. 2025ರ ನವೆಂಬರ್ 20ರಿಂದ 22ರವರೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾಕೂಟ ಉತ್ಸವ–2025 ಜರುಗಿತು.
ಈ ಕ್ರೀಡಾಕೂಟವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ ಅವರು ಭವ್ಯವಾಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಾಹುಲ್ ಶಿಂಧೆ, ಉಪ ಕಾರ್ಯದರ್ಶಿ ಶ್ರೀ ಬಸವರಾಜ ಹೆಗ್ಗನಾಯಕ, ಶ್ರೀ ಬಸವರಾಜ ಅಡವಿಮಠ, ಯೋಜನಾ ನಿರ್ದೇಶಕ ಶ್ರೀ ರವಿ ಬಂಗಾರೆಪ್ಪನ್ನವರ, ಲೆಕ್ಕಾಧಿಕಾರಿ ಶ್ರೀ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾ ಅಧಿಕಾರಿ ಶ್ರೀ ಗಂಗಾಧರ ದಿವಟರ್, ತಾಲೂಕುಗಳ ಕಾರ್ಯನಿರ್ವಾಹಕಾಧಿಕಾರಿಗಳು, ಅಭಿಯಂತರರು, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸಿಬ್ಬಂದಿಯಲ್ಲಿ ಆರೋಗ್ಯ ಜಾಗೃತಿ, ತಂಡಭಾವನೆ ಮತ್ತು ಸಕಾರಾತ್ಮಕತೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳ ಸ್ಪರ್ಧೆಗಳು ಜರುಗಿದವು.
ಇತರೆ ಸುದ್ದಿಗಳು