ವರದಿಗಾರರು :
ಬಸವರಾಜ್ ||
ಸ್ಥಳ :
ಹಾಸನ
ವರದಿ ದಿನಾಂಕ :
29-11-2025
ಅರಸೀಕೆರೆ ತಾಲ್ಲೂಕು ಹೃದಯ ಭಾಗದಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎಸ್ ಶಾಲಿನಿ ಅವರು ಇತ್ತೀಚೆಗೆ ನಡೆದ �
ಅರಸೀಕೆರೆ ಬಾಲಕಿಯರ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ ಅರಸೀಕೆರೆ ತಾಲ್ಲೂಕು ಕೇಂದ್ರ ಭಾಗದಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್. ಶಾಲಿನಿ ಇತ್ತೀಚೆಗೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ತನ್ನ ಪ್ರತಿಭೆಯನ್ನು ಮೆರೆದಿದ್ದಾರೆ. ಉಪನ್ಯಾಸಕರಾದ ಡಿ.ಪಿ. ಮೋಹನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರಸ್ತುತಪಡಿಸಿದ ಶಾಲಿನಿ, ಆಯ್ಕೆ ಸಮಿತಿಯಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಿನಿಯ ಸದನೆಯನ್ನು ಗುರುತಿಸಿ ಕಾಲೇಜಿನ ಪ್ರಾಂಶುಪಾಲ ಪರಮಶಿವಯ್ಯ, ಬೋಧಕ ವೃಂದದ ಸದಸ್ಯರು ಹಾಗೂ ಬೋಧಕೇತರ ಸಿಬ್ಬಂದಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
