ವರದಿಗಾರರು :
ಡಾ .ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
08-11-2025
ಹರೀಶ್ ರಾಯ್ ವಿಧಿವಶ: ‘ಕೆಜಿಎಫ್ ಚಾಚಾ’ ಖ್ಯಾತ ನಟ ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಮತ್ತು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ಜೀವನದಿಂದ ನಿಧನರಾದರು.
ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಗಿಂತ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿದ್ದರು. ಕೆಜಿಎಫ್ ಚಿತ್ರದ ಬಳಿಕ ಅವರು ಜನಪ್ರಿಯರಾಗಿದ್ದು, “ಕೆಜಿಎಫ್ ಚಾಚಾ” ಎಂಬ ಹೆಸರಿನಿಂದ ಖ್ಯಾತಿ ಪಡೆದಿದ್ದರು.
ಹರೀಶ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ಧೈರ್ಯ কামಿಸುತ್ತೇವೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
