ವರದಿಗಾರರು :
ಬಸವರಾಜ ಪೂಜಾರಿ ||
ಸ್ಥಳ :
ಬೀದರ
ವರದಿ ದಿನಾಂಕ :
17-09-2025
ರೈತರ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸರ್ವೇ ಕಾರ್ಯ ಮಾಡಿ ಅದನ್ನು ಬಹಿರಂಗ ಪಡಿಸಿದ ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಸೆಪ್ಟೆಂಬರ್ 16ರಂದು ಮಂಗಳವಾರ ಬೀದರ್ ಜಿಲ್ಲಾ ಪ್ರವಾಸ ಕೈಗೊಂಡು, ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮತ್ತು ನೊಂದ ಸಂತ್ರಸ್ಥರ ಭೇಟಿ ಮತ್ತು ಸಾಂತ್ವನ ಹಾಗೂ ಸರ್ಕಾರ ಕೈಗೊಂಡಿರುವ ನೆರೆ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ 79-80 ಸಾವಿರ ಹೆಕ್ಟೇರ್ ಕೃಷಿ ಪ್ರದೇಶ ಹಾನಿಯಾಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ ತೊಗರಿ, ಸೋಯಾ, ಉದ್ದು, ಹೆಸರು, ಹತ್ತಿ ಕೂಡ ಬೆಳೆಯುತ್ತಾರೆ. ತೊಗರಿ ಬೆಳೆಗಾರರಿಗೆ ಅತಿವೃಷ್ಠಿಯಿಂದ ಸಾಕಷ್ಟು ಹಾನಿಯಾಗಿದೆ. ಆ ರೈತರ ಪರ ನಿಲ್ಲುವುದು ನಮ್ಮ ಪಕ್ಷದ ಗುರಿಯಾಗಿದೆ. ಕಳೆದ ವರ್ಷದ ಬೆಳೆ ವಿಮಾ ಪರಿಹಾರವೇ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ ಎಂದು ರೈತರು ಹೇಳಿದ್ದಾರೆ. ರೈತರಿಗಾಗಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು. ರೈತ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇರುವುದರಿಂದ ಸರ್ಕಾರ ರೈತರ ಸಾಲಮನ್ನಾ ಮಾಡ್ಬೇಕು. ರಾಜ್ಯ ಸರ್ಕಾರ ಶ್ವೇತ ಪತ್ರ ಒರಡಿಸಬೇಕು.ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.
