ವರದಿಗಾರರು :
ಎಚ್ ಎಮ್ ಹವಾಲ್ದಾರ ||
ಸ್ಥಳ :
ಯಾದಗಿರಿ
ವರದಿ ದಿನಾಂಕ :
15-11-2025
“ರೈತರ ತಾಳ್ಮೆ ಪರೀಕ್ಷೆ ನಿಲ್ಲಿಸಿ – ಶಹಾಪುರದಲ್ಲಿ ಬೃಹತ್ ಪ್ರತಿಭಟನೆ”
ಯಾದಗಿರಿ: ಶಹಾಪುರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಮತ್ತು ವಿವಿಧ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ್ ಮೇಟಿ ಬಣದ ವತಿಯಿಂದ ಬೃಹತ್ ಪಾದಯಾತ್ರೆ ಮತ್ತು ಬೈಕ್ ರ‍್ಯಾಲಿ ನಡೆಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಶಹಾಪುರ ತಾಲೂಕು ಅಧ್ಯಕ್ಷ ಧರ್ಮಣ್ಣ ತಹಶೀಲ್ದಾರ್ ಅವರು ಮಾತನಾಡಿ, “ರೈತರ ತಾಳ್ಮೆ ಪರೀಕ್ಷೆ ಮಾಡಬೇಡಿ. ಮಳೆಯಿಂದ ಬೆಳೆ ನಾಶವಾದರೂ ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ. ಬೆಂಬಲ ಬೆಲೆ ನೀಡದಿದ್ದರೆ ಅಧಿಕಾರಿಗಳೇ ಹೊಣೆಗಾರರು" ಎಂದು ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಅವರು, ಬೆಳೆ ನಷ್ಟ ಪರಿಹಾರ, ಮೈಕ್ರೋ ಫೈನಾನ್ಸ್ ಹಾಗೂ ಬ್ಯಾಂಕುಗಳಿಂದಾಗುತ್ತಿರುವ ಕಿರುಕುಳ ನಿಲ್ಲಿಸಬೇಕು ಹಾಗೂ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಮನವಿಯಲ್ಲಿ ತೊಗರಿ, ಜೋಳ, ಭತ್ತ, ಸಜ್ಜೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳಿಗೆ ಹೊಸ ಬೆಂಬಲ ಬೆಲೆ ನಿಗದಿ, ಹಾನಿಗೊಂಡ ಬೆಳೆಗಳಿಗೆ ಪರಿಹಾರ, ಗ್ರಾಮೀಣ ರಸ್ತೆ ದುರಸ್ತಿ ಹಾಗೂ 2026ರ ಏಪ್ರಿಲ್ 20ರವರೆಗೆ ಕೆನಾಲಿಗೆ ನೀರು ಹರಿಸುವ ಬೇಡಿಕೆಗಳನ್ನು ಸಲ್ಲಿಸಲಾಯಿತು.
ಪ್ರಶಾಂತ ಗೌಡ, ಗುರುನಾಥ ರೆಡ್ಡಿ, ದೇವೇಂದ್ರಪ್ಪ ವಾಯ್ ಕೋಲ್ಕರ್ ಸೇರಿದಂತೆ ಹಲವಾರು ರೈತ ನಾಯಕರು ಹಾಗೂ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
