ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
08-11-2025
ದೇವರಹಳ್ಳಿ ಬಳಿ ಬೈಕ್ ಟ್ರ್ಯಾಕ್ಟರ್ ಡಿಕ್ಕಿ — ರೈತ ತೀವ್ರವಾಗಿ ಪೆಟ್ಟು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ರೈತ ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮದ್ಯಾಹ್ನ 12 ರಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದ ಮಹೇಶ್ ಎಂಬ ರೈತ ಬೈಕ್‌ನಲ್ಲಿ ದೇವರಹಳ್ಳಿಯತ್ತ ತೆರಳುತ್ತಿದ್ದ ವೇಳೆ, ಜವರಹಳ್ಳಿ ಮೂಲದ ರೈತನಿಗೆ ಸೇರಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಮಹೇಶ್ ಅವರಿಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಹೆಚ್ಚು ರಕ್ತಸ್ರಾವವಾಗಿದ್ದು ಸ್ಥಳೀಯರು ತಕ್ಷಣ ಮಹೇಶ್ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆಗೆ ರವಾನಿಸಿದ್ದಾರೆ
ಸ್ಥಳೀಯ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
