ತಿಪಟೂರು: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯು ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ
ತಿಪಟೂರು: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯುಪಡೆ ನಡೆಸಿದ ‘ಆಪರೇಷನ್ ಸಿಂಧೂರ್’ ರಕ್ಷಣಾ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ವಾಯುಪಡೆಯ ಯೋಧ ಪ್ರಣವ್ ಬೆಳ್ಳೂರು ಅವರನ್ನು ತಿಪಟೂರಿನ ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಪ್ರಣವ್ ಬೆಳ್ಳೂರು ಅವರು ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ರಾಷ್ಟ್ರದ ರಕ್ಷಣೆಯ ಪ್ರಮುಖ ಮಿಷನ್‌ಗಳಲ್ಲಿ ತಮ್ಮ ಸಾಹಸವನ್ನು ಪ್ರದರ್ಶಿಸಿದ್ದರು. ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ತಂಡದ ಮುಖ್ಯ ಸದಸ್ಯರಲ್ಲೊಬ್ಬರಾದ ಇವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶೌರ್ಯ ಪ್ರಶಸ್ತಿ ನೀಡಿ ಪುರಸ್ಕರಿಸಿರುವುದಾಗಿ ಈ ಸಂದರ್ಭದಲ್ಲಿ ಮಾತನಾಡಿದ ಬಾಗೇಪಳ್ಳಿ ನಟರಾಜ್ ತಿಳಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಪ್ರಣವ್ ಬೆಳ್ಳೂರು ಅವರ ತಂದೆ–ತಾಯಿ ಉಪಸ್ಥಿತರಿದ್ದರು. ಕಲ್ಪತರು ವಿದ್ಯಾ ಸಂಸ್ಥೆಯ ಪರವಾಗಿ ಶಾಲಾ ಪ್ರತಿನಿಧಿಗಳು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಗರ್ವ ವ್ಯಕ್ತಪಡಿಸಿದರು. ಮಾರನಗೆ ರೆಸಂಗಮೇಶ್ ಸೇರಿದಂತೆ ಕಲ್ಪತರು ವಿದ್ಯಾ ಸಂಸ್ಥೆಯ ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇತರೆ ಸುದ್ದಿಗಳು