ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
01-04-2025
ದುನಿಯಾ ವಿಜಯ್ ನಿರ್ದೇಶನದ ಸಿನಿಮಾದಲ್ಲಿ ಉಮಾಶ್ರೀ !
ದುನಿಯಾ ವಿಜಯ್ ಅವರು ಸದ್ಯ ನಟನೆ ಮತ್ತು ನಿರ್ದೇಶನ ಎರಡರಲ್ಲೂ ತೊಡಗಿಸಿಕೊಂಡಿದ್ದಾರೆ. ಮಗಳು ಮೋನಿಷಾ ನಟನೆಯ ‘ಸಿಟಿ ಲೈಟ್ಸ್’ ಸಿನಿಮಾಗೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಹೀಗಿರುವಾಗ ಈ ಚಿತ್ರತಂಡಕ್ಕೆ ಹಿರಿಯ ನಟಿ ಉಮಾಶ್ರೀ ಸೇರಿಕೊಂಡಿದ್ದಾರೆ.
ನಟಿ ಉಮಾಶ್ರೀಗೆ ವಿಜಯ್ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ. ವಿಭಿನ್ನ ಕಥೆ ಹೇಳಲು ಹೊರಟಿರುವ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರಕ್ಕೆ ಉಮಾಶ್ರೀ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪವರ್‌ಫುಲ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ತಿದ್ದಾರೆ.
ಚಿತ್ರದ ನಾಯಕನಾಗಿ ವಿನಯ್ ರಾಜ್‌ಕುಮಾರ್ ಕಾಣಿಸಿಕೊಳ್ತಿದ್ರೆ, ನಾಯಕಿಯಾಗಿ ಮೋನಿಷಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ವಿಜಯ್ ಅವರು ವಿಶೇಷ ಸಮುದಾಯದ ಕಥೆಯೊಂದನ್ನು ಹೇಳಲು ಹೊರಟಿದ್ದಾರೆ.
ಲ್ಯಾಂಡ್‌ಲಾರ್ಡ್, ತಮಿಳಿನ ನಟಿ ನಯನತಾರಾ ಜೊತೆಗಿನ ಸಿನಿಮಾ, ‘ಸಿಟಿ ಲೈಟ್ಸ್’ ಚಿತ್ರ ನಿರ್ದೇಶನ ಮಾಡುವುದರ ಜೊತೆಗೆ ಹಲವು ಚಿತ್ರಗಳು ವಿಜಯ್ ಕೈಯಲ್ಲಿದೆ.
