ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
20-03-2025
ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ !
ಟಾಲಿವುಡ್ ನಟ ಪ್ರಭಾಸ್ ತೆಲುಗಿನ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ವರ್ಷದ ಅಂತ್ಯದಲ್ಲಿ ‘ಕಲ್ಕಿ ಪಾರ್ಟ್ 2’ ಶುರು ಆಗುವ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಕಳೆದ ವರ್ಷ ಜೂನ್‌ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ಪ್ರಭಾಸ್, ಬಿಗ್ ಬಿ, ಕಮಲ್ ಹಾಸನ್, ದೀಪಿಕಾ ಕಾಂಬಿನೇಷನ್ ಅನ್ನು ಜನ ಮೆಚ್ಚಿಕೊಂಡಿದ್ದರು. ಈಗ ಮತ್ತೆ ಇದರ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಈ ವಿಚಾರ ಕೇಳಿಯೇ ಪ್ರಭಾಸ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
ಈಗಾಗಲೇ ಪ್ರಭಾಸ್, ದೀಪಿಕಾ, ಬಿಗ್ ಬಿ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಸಕ್ಸಸ್ ಕಂಡಿದೆ. ಇದರ ಸೀಕ್ವೆಲ್ ಯಾವಾಗ ಶುರುವಾಗಲಿದೆ ಎಂಬುದಕ್ಕೆ ಚಿತ್ರದ ನಿರ್ದೇಶಕ ನಾಗ್ ಅಶ್ವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರಭಾಸ್, ಅಮಿತಾಭ್, ಕಮಲ್ ಪಾತ್ರಗಳನ್ನು ಮತ್ತೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ.
