ವರದಿಗಾರರು :
ದರ್ಶನ್ ಎಂ.ಎನ್. ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
26-11-2025
ದುರ್ಘಟನೆ: ಕುಂದುವಾಡ ಕೆರೆಯಲ್ಲಿ ಯುವಕರು ಮುಳುಗಿ ಸಾವು
ದಾವಣಗೆರೆ: ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಶಾಂತಿನಗರದ ಚೇತನ್ (22) ಮತ್ತು ಮನು (23) ಅವರು ಇತ್ತೀಚೆಗೆ ನಾಪತ್ತೆಯಾಗಿದ್ದರು. ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿದ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಂಬಂಧಿಕರು ಎಲ್ಲೆಡೆ ಪರಿಶೀಲನೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಇಬ್ಬರು ಯುವಕರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಅವರು ಮೀನು ಹಿಡಿಯಲು ಕೆರೆಗೆ ಹೋಗಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸುತ್ತು ಅನುಮಾನಾಸ್ಪದ ಸಂದರ್ಭಗಳು ಇರುವುದರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.
